1 ಪೂರ್ವಕಾಲ ವೃತ್ತಾಂತ 26:13 - ಕನ್ನಡ ಸತ್ಯವೇದವು C.L. Bible (BSI)
13 ಅವರು, ಕನಿಷ್ಠ ಕುಟುಂಬವೆಂದಾಗಲಿ ಶ್ರೇಷ್ಠ ಕುಟುಂಬವೆಂದಾಗಲಿ ವ್ಯತ್ಯಾಸಮಾಡದೆ, ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಳ್ಳುತ್ತಿದ್ದರು.
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು:
ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ, ತಮ್ಮ ಕುಲಬಂಧುಗಳಾದ ಆರೋನ್ಯರಂತೆ, ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆ ಹಾಗೂ ಯಾಜಕರ ಮತ್ತು ಲೇವಿಯರ ಕುಟುಂಬ ಮುಖ್ಯಸ್ಥರ ಮುಂದೆ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.
ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.