Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:22 - ಕನ್ನಡ ಸತ್ಯವೇದವು C.L. Bible (BSI)

22 ಮತ್ತು ಯೆಹೀಯೇಲ್ಯರಾದ ಜೇತಾಮನು ಹಾಗೂ ಯೋವೇಲನೆಂಬ ಅವನ ತಮ್ಮನು ಸರ್ವೇಶ್ವರನ ಆಲಯದ ಭಂಡಾರಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೀಯೇಲ್ಯರಾದ ಜೇತಾಮನೂ ಯೋವೇಲನೆಂಬ ಅವನ ತಮ್ಮನೂ ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೀಯೇಲೀಯ ಗಂಡುಮಕ್ಕಳು: ಜೀತಾಮ್ ಮತ್ತು ಅವನ ತಮ್ಮನಾದ ಯೋವೇಲ. ಇವರು ಸಹ ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೀಯೇಲನ ಪುತ್ರರು ಜೇತಾಮನು, ಅವನ ಸಹೋದರನಾದ ಯೋಯೇಲನು; ಇವರು ಯೆಹೋವ ದೇವರ ಆಲಯದ ಬೊಕ್ಕಸಗಳ ಮೇಲೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:22
6 ತಿಳಿವುಗಳ ಹೋಲಿಕೆ  

ಲದ್ದಾನನ ಮಕ್ಕಳಾದ ಯೆಹೀಯೇಲ್, ಜೇತಾಮ್, ಯೋವೇಲ್ ಎಂಬ ಮೂರು ಮಂದಿ ಮುಖ್ಯಸ್ಥರಾಗಿದ್ದರು.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;


ರತ್ನಗಳಿದ್ದವರು ಅವುಗಳನ್ನು ಸರ್ವೇಶ್ವರನ ಆಲಯದ ಭಂಡಾರಕ್ಕಾಗಿ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.


ಮೇಲೆ ಕಂಡವರ ಕುಲಬಂಧುಗಳೂ ಹಾಗೂ ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುವ ಲೇವಿಯರ ಪಟ್ಟಿ:


ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಮುಖ್ಯಸ್ಥರಲ್ಲಿ ಯೆಹೀಯೇಲೀ;


ಅಮ್ರಾಮ್, ಇಚ್ಚಾರ್, ಹೆಬ್ರೋನ್, ಉಜ್ಜೀಯೇಲ್


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು