Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿವಿಧ ಸೇವೆಯನ್ನು ಮಾಡಬೇಕಾಗಿದ್ದ ವರ್ಗಗಳ ಅಧಿಪತಿಗಳು ಹಾಗು ಇವರ ಕಾರ್ಯಕ್ರಮಗಳ ಪಟ್ಟಿ: ವರ್ಷದ ಎಲ್ಲಾ ತಿಂಗಳುಗಳಲ್ಲಿ, ತಿಂಗಳಿಗೆ ಒಂದು ವರ್ಗದಂತೆ, ಸರದಿಯ ಮೇಲೆ ಕೆಲಸಕ್ಕಾಗಿ ಬರುತ್ತಿದ್ದ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳು ಇವರ ಲೆಕ್ಕ. ವರುಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರತಿಯ ಮೇಲೆ ಕೆಲಸಕ್ಕೋಸ್ಕರ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ. ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು, ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು. ಹೇಗೆಂದರೆ, ಕುಟುಂಬಗಳ ಮುಖ್ಯಸ್ಥರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಅಧಿಪತಿಗಳೂ ವರ್ಷದ ಎಲ್ಲಾ ತಿಂಗಳುಗಳಲ್ಲಿ ಪ್ರತಿ ತಿಂಗಳು ಸರತಿಯಂತೆ ಬರುತ್ತಿದ್ದ ವರ್ಗಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿವರ್ಗದಲ್ಲಿ 24,000 ಮಂದಿಯಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:1
18 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.


ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ, ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.


ಮೇಲೆ ಹೇಳಿದ ಜಿಲ್ಲಾಧಿಕಾರಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುತ್ತಿದ್ದ ಎಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸುತ್ತಿದ್ದರು.


ಸರ್ವ ಇಸ್ರಯೇಲರ ಮೇಲೆ ಸೊಲೊಮೋನನು ಹನ್ನೆರಡು ಜನ ಜಿಲ್ಲಾಧಿಕಾರಿಗಳನ್ನು ನೇಮಿಸಿದ್ದನು. ಅವರು ತಮ್ಮ ಜಿಲ್ಲೆಗಳಿಂದ ಅರಸನಿಗೂ ಅರಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದರು. ಪ್ರತಿಯೊಬ್ಬನೂ ವರ್ಷದಲ್ಲಿ ಒಂದೊಂದು ತಿಂಗಳು ಪೂರೈಸಬೇಕಾಗಿತ್ತು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ಶ್ರೀಮಂತರೂ ಕುಟುಂಬಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಮಂದಿ ಇದ್ದರು. ಅರಸ ದಾವೀದನು ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲೂ ರಾಜಕೀಯ ಕಾರ್ಯಗಳಲ್ಲೂ ಅಧಿಕಾರಿಗಳನ್ನಾಗಿ ನೇಮಿಸಿದನು.


ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕ.


ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ


ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.


ದಾವೀದನ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು.


ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:


ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು