Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:12 - ಕನ್ನಡ ಸತ್ಯವೇದವು C.L. Bible (BSI)

12 ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವಾಲಯದ ಪ್ರತಿಯೊಂದು ಭಾಗದ ನಕ್ಷೆಯನ್ನು ದಾವೀದನು ತಯಾರಿಸಿದ್ದನು. ದೇವಾಲಯದ ಸುತ್ತಣ ಅಂಗಳಗಳ ನಕ್ಷೆ ಮತ್ತು ಸುತ್ತಲೂ ಇರುವ ಕೋಣೆಗಳ ನಕ್ಷೆಯನ್ನು ದೇವಾಲಯದ ಪವಿತ್ರ ವಸ್ತುಗಳನ್ನು ಇಡುವ ಕೋಣೆಗಳ ಯೋಜನೆಯನ್ನು ಮತ್ತು ನಕ್ಷೆಗಳನ್ನು ಸೊಲೊಮೋನನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರ ಮನೆಯ ಅಂಗಳಗಳು, ಸುತ್ತಲಿರುವ ಕೊಠಡಿಗಳಾದ ಯೆಹೋವ ದೇವರ ಮನೆಯ ಉಗ್ರಾಣಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿಯನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:12
16 ತಿಳಿವುಗಳ ಹೋಲಿಕೆ  

ಮೇಲೆ ಕಂಡವರ ಕುಲಬಂಧುಗಳೂ ಹಾಗೂ ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುವ ಲೇವಿಯರ ಪಟ್ಟಿ:


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ಆಗ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನೂ


ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.


ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಇದಲ್ಲದೆ, ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಸರ್ವೇಶ್ವರನ ಆಲಯದಲ್ಲಿ ತಂದಿಟ್ಟನು.


ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನು ಹಾಗು ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ದೋಚಿಕೊಂಡು ಹೋದನು.


“ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;


ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೊಠಡಿಯೂ ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ದಹನ ಬಲಿಪ್ರಾಣಿಗಳ ಮಾಂಸವನ್ನು ತೊಳೆಯುತ್ತಿದ್ದರು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು