1 ಪೂರ್ವಕಾಲ ವೃತ್ತಾಂತ 28:21 - ಕನ್ನಡ ಸತ್ಯವೇದವು C.L. Bible (BSI)21 ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯ ಸಂಬಂಧವಾದ ಬೇಕಾದಕೆಲಸವನ್ನು ಮಾಡುವದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇರುತ್ತಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೇಮಿಸಲ್ಪಟ್ಟ ಯಾಜಕರ ಮತ್ತು ಲೇವಿಯರ ತಂಡಗಳು ದೇವಾಲಯದ ಸೇವೆಗಾಗಿ ಸಿದ್ಧರಾಗಿದ್ದಾರೆ; ಅನುಭವಸ್ಥರಾದ ಕಾರ್ಮಿಕರು ದೇವಾಲಯದ ಕೆಲಸಕ್ಕಾಗಿ ಸಿದ್ಧರಾಗಿದ್ದಾರೆ. ಕೆಲಸದ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ನಿನ್ನ ಆಜ್ಞೆಯನ್ನು ಪರಿಪಾಲಿಸಲು ಸಿದ್ಧರಾಗಿದ್ದಾರೆ” ಎಂದು ದಾವೀದನು ಸೊಲೊಮೋನನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.” ಅಧ್ಯಾಯವನ್ನು ನೋಡಿ |