Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ದೇವರು ನನಗೆ - ನೀನು ಮಹಾಯುದ್ಧಗಳನ್ನು ನಡಿಸಿ ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ದೇವರು ನನಗೆ, ‘ದಾವೀದನೇ, ನೀನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಯಾಕೆಂದರೆ ನೀನೊಬ್ಬ ರಣವೀರನಾಗಿದ್ದುದರಿಂದ ಎಷ್ಟೋ ಮಂದಿಯನ್ನು ಕೊಂದು ಅವರ ರಕ್ತಸುರಿಸಿರುವೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ದೇವರು ನನಗೆ, ‘ನೀನು ಮಹಾ ಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:3
5 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರ ನನಗೆ, “ನೀನು ಬಹಳ ರಕ್ತವನ್ನು ಸುರಿಸಿದವನು; ಮಹಾಯುದ್ಧಗಳನ್ನು ನಡೆಸಿದವನು. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ, ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.


ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:


“ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು