Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:7 - ಕನ್ನಡ ಸತ್ಯವೇದವು C.L. Bible (BSI)

7 ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು’ ಎಂದು ಅವರು ನನಗೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನೆಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೊಲೊಮೋನನು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯನಾಗಿದ್ದಾನೆ. ಅವನು ಹೀಗೆಯೇ ಮುಂದುವರಿದರೆ ನಾನು ಅವನ ರಾಜ್ಯವನ್ನು ಶಾಶ್ವತವಾಗಿ ಬಲಗೊಳಿಸುವೆನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈ ಹೊತ್ತಿನ ಹಾಗೆ ನನ್ನ ಆಜ್ಞೆಗಳನ್ನೂ, ನನ್ನ ನ್ಯಾಯಗಳನ್ನೂ ಅವನು ನಡೆಸಲು ದೃಢನಾಗಿದ್ದರೆ, ಅವನ ರಾಜ್ಯವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:7
14 ತಿಳಿವುಗಳ ಹೋಲಿಕೆ  

ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.


ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಸರ್ವೇಶ್ವರನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಅವರ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಗೊಳ್ಳಿರಿ.”


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


“ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II


ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


“ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು