Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:9 - ಕನ್ನಡ ಸತ್ಯವೇದವು C.L. Bible (BSI)

9 “ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:9
79 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಸರ್ವೇಶ್ವರನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಅವರ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಗೊಳ್ಳಿರಿ.”


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ದೇವರು ಆತ್ಮಸ್ವರೂಪಿ, ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೆವು. ಆದುದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


“ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.


ಇಂತೆಂದ ನೀನೆ ತ್ಯಜಿಸಿರುವೆ ನಿನ್ನಾಭಿಷಿಕ್ತನನು I ತಳ್ಳಿಬಿಟ್ಟಿರುವೆ ಕೋಪಾವೇಶದಿಂದ ಅವನನು II


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.


ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.


ನನಗೆ ರಕ್ಷೆ ನೀಡುವ ಗುರಾಣಿ, ದೇವನೇ I ನೇರಮನಸ್ಕರಿಗೆ ಸಂರಕ್ಷಣೆ ಆತನೆ II


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು