Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:10 - ಕನ್ನಡ ಸತ್ಯವೇದವು C.L. Bible (BSI)

10 ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನಂದರೆ - ನಮ್ಮ ಪಿತೃವಾಗಿರುವ ಇಸ್ರಾಯೇಲನ ದೇವರೇ, ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:10
33 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


“ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನನ್ನ ತಂದೆ ದಾವೀದನಿಗೆ ಅವರು ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ಪ್ರಕಟಿಸುವೆನು ನಾನು ಸರ್ವೇಶ್ವರನ ನಾಮಮಹತ್ವವನು ಕೊಂಡಾಡಿ ನೀವು ಆ ದೇವನ ಮಹಾಮಹಿಮೆಯನು.


ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರ! ಏಕೆಂದರೆ ಜ್ಞಾನವೂ ಶಕ್ತಿಯೂ ಆತನಿಗೆ ಸ್ವಂತ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು