Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:13 - ಕನ್ನಡ ಸತ್ಯವೇದವು C.L. Bible (BSI)

13 ಹೇ, ದೇವಾ, ಸಲ್ಲಿಸುವೆವು ಕೃತಜ್ಞತೆ ನಿಮಗೆ ಹಾಡುವೆವು ಕೀರ್ತನೆ ನಿಮ್ಮ ನಾಮ ಪ್ರತಿಭೆಗೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ನಮ್ಮ ದೇವರೇ, ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ, ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:13
12 ತಿಳಿವುಗಳ ಹೋಲಿಕೆ  

ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.


ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ಪ್ರಕಟಿಸುವೆನು ನಾನು ಸರ್ವೇಶ್ವರನ ನಾಮಮಹತ್ವವನು ಕೊಂಡಾಡಿ ನೀವು ಆ ದೇವನ ಮಹಾಮಹಿಮೆಯನು.


ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು