Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:14 - ಕನ್ನಡ ಸತ್ಯವೇದವು C.L. Bible (BSI)

14 “ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:14
24 ತಿಳಿವುಗಳ ಹೋಲಿಕೆ  

ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ಹೇ, ದೇವಾ, ಸಲ್ಲಿಸುವೆವು ಕೃತಜ್ಞತೆ ನಿಮಗೆ ಹಾಡುವೆವು ಕೀರ್ತನೆ ನಿಮ್ಮ ನಾಮ ಪ್ರತಿಭೆಗೆ!


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು.


ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.


ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.


ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು.


ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ನಮ್ಮ ದೇವರಾದ ಸರ್ವೇಶ್ವರಾ, ನಿಮ್ಮ ಶ್ರೀನಾಮಕ್ಕೆ ಒಂದು ನಿಲಯ ನಿರ್ಮಿಸಲು ನಾವು ಸಂಗ್ರಹಿಸಿರುವ ಈ ಎಲ್ಲಾ ವಸ್ತುಗಳು ನಮಗೆ ದೊರಕಿರುವುದು ನಿಮ್ಮಿಂದಲೇ. ಇವೆಲ್ಲವೂ ನಿಮ್ಮವೇ.


ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು