Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:15 - ಕನ್ನಡ ಸತ್ಯವೇದವು C.L. Bible (BSI)

15 ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ ನಮ್ಮ ಪಿತೃಗಳೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ, ನಮ್ಮ ಆಯುಷ್ಕಾಲವು ನೆರಳಿನಂತಿದೆ; ನಮಗೆ ಯಾವ ನಿರೀಕ್ಷೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:15
22 ತಿಳಿವುಗಳ ಹೋಲಿಕೆ  

ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.


ಧರೆಯೊಳು ಪ್ರವಾಸಿಯಾಗಿ ನಾನಿರುವೆನಯ್ಯಾ I ನಿನ್ನಾಜ್ಞೆಗಳನು ನನಗೆ ಮರೆಮಾಡಬೇಡಯ್ಯಾ II


ನಿನ್ನ ಕನಲಿನಲೇ ಕಳೆದಿವೆ ನಮ್ಮ ದಿನಗಳು I ನಿಟ್ಟುಸಿರಿನಂತೆ ಮುಗಿವುದೆಮ್ಮ ಬದುಕುಬಾಳು II


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.


ಸಿರಿಸಂಪತ್ತು ಹೆಚ್ಚಾಗಿ ಇದ್ದುದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿ ವಾಸಮಾಡಲು ಅನುಕೂಲವಾಗಿರಲಿಲ್ಲ; ಪಶುಪ್ರಾಣಿಗಳು ಬಹಳ ಆಗಿದ್ದುದರಿಂದ ಅವರು ತಂಗಿದ್ದ ನಾಡು ಅವರಿಗೆ ಸಾಲದೆ ಹೋಯಿತು.


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ನಮ್ಮ ದೇವರಾದ ಸರ್ವೇಶ್ವರಾ, ನಿಮ್ಮ ಶ್ರೀನಾಮಕ್ಕೆ ಒಂದು ನಿಲಯ ನಿರ್ಮಿಸಲು ನಾವು ಸಂಗ್ರಹಿಸಿರುವ ಈ ಎಲ್ಲಾ ವಸ್ತುಗಳು ನಮಗೆ ದೊರಕಿರುವುದು ನಿಮ್ಮಿಂದಲೇ. ಇವೆಲ್ಲವೂ ನಿಮ್ಮವೇ.


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ಅಬ್ರಹಾಮನು ಫಿಲಿಷ್ಟಿಯರ ಆ ಪ್ರಾಂತ್ಯದಲ್ಲಿ ಬಹುಕಾಲ ಪ್ರವಾಸಿಯಾಗಿದ್ದನು.


ನಾವಾದರೋ ನಿನ್ನೆ ಹುಟ್ಟಿದವರು, ಏನೂ ಅರಿಯದವರು ಭೂಲೋಕದಲ್ಲಿನ ನಮ್ಮ ಬಾಳು ಕೇವಲ ನೆರಳು.


ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು