Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:16 - ಕನ್ನಡ ಸತ್ಯವೇದವು C.L. Bible (BSI)

16 ನಮ್ಮ ದೇವರಾದ ಸರ್ವೇಶ್ವರಾ, ನಿಮ್ಮ ಶ್ರೀನಾಮಕ್ಕೆ ಒಂದು ನಿಲಯ ನಿರ್ಮಿಸಲು ನಾವು ಸಂಗ್ರಹಿಸಿರುವ ಈ ಎಲ್ಲಾ ವಸ್ತುಗಳು ನಮಗೆ ದೊರಕಿರುವುದು ನಿಮ್ಮಿಂದಲೇ. ಇವೆಲ್ಲವೂ ನಿಮ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧನಾಮಕ್ಕೋಸ್ಕರ ಆಲಯಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು; ಇವೆಲ್ಲಾ ನಿನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಮ್ಮ ದೇವರಾದ ಯೆಹೋವ ದೇವರೇ, ನಿಮ್ಮ ಪರಿಶುದ್ಧ ನಾಮಕ್ಕೋಸ್ಕರ ನಿಮಗೆ ಆಲಯವನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿಮ್ಮಿಂದ ಬಂದದ್ದು. ಸಮಸ್ತವೂ ನಿಮ್ಮದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:16
8 ತಿಳಿವುಗಳ ಹೋಲಿಕೆ  

ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ಮೊದಲನೆಯವನು ಮುಂದೆ ಬಂದು, ‘ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.


ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು