Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:18 - ಕನ್ನಡ ಸತ್ಯವೇದವು C.L. Bible (BSI)

18 ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:18
23 ತಿಳಿವುಗಳ ಹೋಲಿಕೆ  

ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ.


ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ರಕ್ಷಣೆಯನು ಪ್ರಭು, ನಿರೀಕ್ಷಿಸುತ್ತಿರುವೆ I ನಿನ್ನ ಆಜ್ಞೆಗಳನು ನಾನು ಕೈಗೊಂಡಿರುವೆ II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು