1 ಪೂರ್ವಕಾಲ ವೃತ್ತಾಂತ 29:19 - ಕನ್ನಡ ಸತ್ಯವೇದವು C.L. Bible (BSI)19 ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು. ಅಧ್ಯಾಯವನ್ನು ನೋಡಿ |