Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:20 - ಕನ್ನಡ ಸತ್ಯವೇದವು C.L. Bible (BSI)

20 ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ - ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ಆತನನ್ನೂ ಅರಸನನ್ನೂ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:20
20 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.


ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,


ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.


ಇದನ್ನು ಕೇಳಿದ ಆ ಮನುಷ್ಯ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದನು.


ಅವರು ಕೂಡ ಬಹಳ ಸಂತೋಷಪಟ್ಟು ದೇವರಿಗೆ ಧನ್ಯವಾದ ಸಲ್ಲಿಸಿದರು. ರೂಬೇನ್ ಹಾಗೂ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ನಾಡನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ತೊರೆದುಬಿಟ್ಟರು.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು