Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:21 - ಕನ್ನಡ ಸತ್ಯವೇದವು C.L. Bible (BSI)

21 ಮರುದಿನ ಅವರು ಸರ್ವೇಶ್ವರನಿಗೆ ಬಲಿಗಳನ್ನೂ ದಹನಬಲಿಗಳನ್ನೂ ಸಮರ್ಪಿಸಿದರು. ಆ ದಿನ ಬಲಿದಾನಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನ ಬಲಿಗಳನ್ನೂ ಸಮರ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿವಸ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲ್ಯರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಾರನೆಯ ದಿವಸದಲ್ಲಿ ಅವರು ಯೆಹೋವ ದೇವರಿಗೆ ಬಲಿಗಳನ್ನು ವಧಿಸಿ, ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ, ಅವುಗಳ ಪಾನದ ಅರ್ಪಣೆಗಳನ್ನೂ, ಸಮಸ್ತ ಇಸ್ರಾಯೇಲರಿಗೋಸ್ಕರ ಬಹಳವಾಗಿ ಬಲಿಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:21
7 ತಿಳಿವುಗಳ ಹೋಲಿಕೆ  

ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.


ಮತ್ತು ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನು ಸಮರ್ಪಿಸಬೇಕು.


ಮತ್ತು ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನು ತಂದು ಸಮರ್ಪಿಸಬೇಕು. ಇದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗುವುದು.


ಮತ್ತು ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ದಹನಬಲಿದಾನವಾಗಿ ಇಲ್ಲವೆ ಸಮಾಧಾನ ಬಲಿಯಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನು ಸಮರ್ಪಿಸಬೇಕು.


ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು