Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:23 - ಕನ್ನಡ ಸತ್ಯವೇದವು C.L. Bible (BSI)

23 ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕೂತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲ್ಯರೆಲ್ಲರೂ ವಿಧೇಯರಾಗಿ ನಡೆಯುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಯೆಹೋವ ದೇವರ ಸಿಂಹಾಸನದ ಮೇಲೆ ಕುಳಿತುಕೊಂಡು, ಸಮೃದ್ಧಿ ಹೊಂದಿದನು. ಸಮಸ್ತ ಇಸ್ರಾಯೇಲರು ಅವನಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:23
21 ತಿಳಿವುಗಳ ಹೋಲಿಕೆ  

ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.


ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


“ನನ್ನ ಮಗನೇ, ನೀನು ಕೃತಾರ್ಥನಾಗಬೇಕು; ನಿನ್ನ ದೇವರಾದ ಸರ್ವೇಶ್ವರ ನನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟಬೇಕು. ಆ ಸರ್ವೇಶ್ವರ ನಿನ್ನೊಂದಿಗಿರಲಿ!


ಇದಲ್ಲದೆ, ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.


ಎಲ್ಲಾ ಅಧಿಪತಿಗಳು, ದಂಡಿನವರು, ಹಾಗೂ ಅರಸ ದಾವೀದನ ಎಲ್ಲಾ ಮಕ್ಕಳು ಅವನಿಗೆ ಅಧೀನರಾದರು.


ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ನೀನು ಅರಸ ದಾವೀದನ ಬಳಿಗೆ ಹೋಗಿ, ‘ನನ್ನ ಒಡೆಯರಾದ ಅರಸರು ತಮ್ಮ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು, ಅವನೇ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದಿರಲ್ಲವೇ? ಹೀಗಿದ್ದ ಮೇಲೆ ಅದೋನೀಯನು ಅರಸನಾದುದು ಹೇಗೆ?’ ಎಂದು ಕೇಳು.


ನನ್ನ ತರುವಾಯ ನನ್ನ ಮಗ ಸೊಲೊಮೋನನೇ ಅರಸನಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು. ನಾನು ನಿನಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಈ ಪ್ರಮಾಣವನ್ನು ಈ ದಿನವೇ ನೆರವೇರಿಸುತ್ತೇನೆ,” ಎಂದನು.


ಆಮೇಲೆ ನೀವು ಅವನ ಹಿಂದೆ ಬನ್ನಿ; ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಯೇಲರ ಮತ್ತು ಯೆಹೂದ್ಯರ ಮೇಲೆ ಅವನನ್ನೇ ಅಧಿಪತಿಯನ್ನಾಗಿ ನೇಮಿಸಿದ್ದೇನೆ,” ಎಂದನು.


ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ಸೊಲೊಮೋನನು, “ನೀವು ನನ್ನ ತಂದೆ ದಾವೀದನಿಗೆ ಮಹಾಕೃಪೆಯನ್ನು ತೋರಿಸಿದಿರಿ. ಅವರ ಸ್ಥಾನದಲ್ಲಿ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.


ಸೊಲೊಮೋನನು ಜೆರುಸಲೇಮಿನಲ್ಲಿ ಇದ್ದುಕೊಂಡು ಎಲ್ಲ ಇಸ್ರಯೇಲರನ್ನು ನಾಲ್ವತ್ತು ವರ್ಷ ಆಳಿದನಂತರ ನಿಧನನಾಗಿ ಪಿತೃಗಳ ಬಳಿಗೆ ಸೇರಿದನು.


ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಇಸ್ರಯೇಲರಿಗೆ ಅರಸನಾಗಿದ್ದ ದಾವೀದನ ಮಗ ಸೊಲೊಮೋನನ ಜ್ಞಾನೋಕ್ತಿಗಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು