Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:25 - ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಇಸ್ರಾಯೇಲ್ಯರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲ್ಯರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:25
13 ತಿಳಿವುಗಳ ಹೋಲಿಕೆ  

ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.


ಹೀಗೆ ಜೆರುಸಲೇಮಿನಲ್ಲಿ ಹಿಂದೆ ಇದ್ದ ಎಲ್ಲರಿಗಿಂತಲೂ ಅಭಿವೃದ್ಧಿಹೊಂದಿ ಶ್ರೀಮಂತನಾದೆ.


ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.


ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?


ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.


ಎಲ್ಲಾ ಅಧಿಪತಿಗಳು, ದಂಡಿನವರು, ಹಾಗೂ ಅರಸ ದಾವೀದನ ಎಲ್ಲಾ ಮಕ್ಕಳು ಅವನಿಗೆ ಅಧೀನರಾದರು.


ಸರ್ವೇಶ್ವರಸ್ವಾಮಿ ನನ್ನ ಒಡೆಯರೂ ಅರಸರೂ ಆದ ನಿಮ್ಮ ಸಂಗಡ ಇದ್ದ ಹಾಗೆ ಸೊಲೊಮೋನನ ಸಂಗಡವೂ ಇದ್ದು, ರಾಜ್ಯವನ್ನು ನನ್ನ ಒಡೆಯರೂ ಅರಸರೂ ಆದ ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಹೆಚ್ಚು ಅಭಿವೃದ್ಧಿಮಾಡಲಿ!” ಎಂದು ನುಡಿದನು.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು