Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:15 - ಕನ್ನಡ ಸತ್ಯವೇದವು C.L. Bible (BSI)

15 ಯೋಷೀಯನಿಗೆ ನಾಲ್ಕು ಜನಮಕ್ಕಳು: ಯೋಹಾನಾನ್, ಯೆಹೋಯಾಕೀಮ್, ಚಿದ್ಕೀಯ ಮತ್ತು ಶಲ್ಲೂಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೋಷೀಯನ ಮಕ್ಕಳು - ಚೊಚ್ಚಲನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ್; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೋಷೀಯನ ಗಂಡುಮಕ್ಕಳು ಯಾರೆಂದರೆ: ಮೊದಲನೆಯವನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:15
13 ತಿಳಿವುಗಳ ಹೋಲಿಕೆ  

ಫರೋಹ ನೆಕೋವನು, ಯೋಷೀಯನಿಗೆ ಬದಲಾಗಿ ಅವನ ಮಗ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು, ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದನು; ಯೆಹೋವಾಹಾಜನು ಅಲ್ಲೆ ಮೃತನಾದನು.


ಯೆಹೋವಾಹಾಜನು ಅರಸನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಆದ ಹಮೂಟಲ್ ಎಂಬಾಕೆ ಇವನ ತಾಯಿ.


ಯೆಹೋಯಾಕೀಮನಿಗೆ ಯೆಕೊನ್ಯ ಮತ್ತು ಚಿದ್ಕೀಯ ಎಂಬಿಬ್ಬರು ಮಕ್ಕಳಿದ್ದರು.


ಅಲ್ಲದೆ, ಜುದೇಯದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಜುದೇಯದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ಜನರು ಸೆರೆಹೋಗುವ ತನಕ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬರುತ್ತಿತ್ತು.


ಜುದೇಯದ ಅರಸನಾದ ಯೋಷೀಯನ ಮಗನೂ ತನ್ನ ತಂದೆ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಹಾಗು ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಸರ್ವೇಶ್ವರ ಹೇಳುವುದು ಏನೆಂದರೆ:


ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.


ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.


ನಾಡಿನ ಜನರು ಯೋಷೀಯನ ಮಗ ಯೆಹೋವಾಹಾಜನನ್ನು ಅವನ ತಂದೆಗೆ ಬದಲಾಗಿ, ಜೆರುಸಲೇಮಿನಲ್ಲಿ ಅರಸನನ್ನಾಗಿ ಮಾಡಿದರು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


“ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು