Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:2 - ಕನ್ನಡ ಸತ್ಯವೇದವು C.L. Bible (BSI)

2 ಅಬ್ಷಾಲೋಮ - ಗೆಷೂರಿನ ಅರಸ ತಲ್ಮೈಯ ಮಗಳು ಮಾಕ ಇವನ ತಾಯಿ. ಅದೋನಿಯ - ಹಗ್ಗೀತ್ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು. ನಾಲ್ಕನೆಯವನು ಅದೋನೀಯ; ಇವನು ಹಗ್ಗೀತಳ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:2
20 ತಿಳಿವುಗಳ ಹೋಲಿಕೆ  

ಆದರೆ ಗೆಷೂರ್ಯರ ಮತ್ತು ಅರಾಮ್ಯರ ರಾಜ್ಯಗಳವರು ಯಾಯೀರನ ಹಾಗೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಅವುಗಳ ಸಮೀಪದ ಪಟ್ಟಣಗಳನ್ನೂ ಸೇರಿ ಒಟ್ಟು ಅರುವತ್ತು ಪಟ್ಟಣಗಳನ್ನು ಗೆದ್ದುಕೊಂಡರು. ಅಲ್ಲಿ ವಾಸಿಸಿದ್ದ ಎಲ್ಲಾ ಜನರೂ ಗಿಲ್ಯಾದನ ತಂದೆ ಮಾಕೀರನ ವಂಶಜರೇ ಆಗಿದ್ದರು.


ಈಗಾಗಲೇ ಅಬ್ಷಾಲೋಮನು ಸತ್ತುಹೋಗಿದ್ದನು. ದಾವೀದನಿಗೆ ಹಗ್ಗೀತಳಲ್ಲಿ ಹುಟ್ಟಿದ ಅದೋನಿಯನೇ ಜೀವದಿಂದ ಉಳಿದವರಲ್ಲಿ ಹಿರಿಯ ಮಗ. ಅವನು ಬಹಳ ಸುಂದರನು. ದಾವೀದನು ಯಾವುದೇ ವಿಷಯದಲ್ಲಿ ಅವನನ್ನು ಎಂದೂ ಗದರಿಸಿರಲಿಲ್ಲ. ತಾನೇ ರಾಜನಾಗಬೇಕೆಂಬ ಆಕಾಂಕ್ಷೆ ಅವನದು. ಎಂದೇ ತನಗೋಸ್ಕರ ರಥ, ರಥಾಶ್ವಗಳನ್ನು ಹಾಗು ಐವತ್ತು ಮಂದಿ ಬೆಂಗಾವಲಿಗರನ್ನು ನೇಮಿಸಿಕೊಂಡಿದ್ದನು.


ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.


ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.


ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.


ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.


ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.


ಬಳಿಕ ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರೂಸ‍ಲೇಮಿಗೆ ಕರೆದುಕೊಂಡು ಬಂದನು.


ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಚೆಲುವೆಯಾದ ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.


ನಾಲ್ಕನೆಯವನು ಅದೋನೀಯನು; ಇವನು ಹಗ್ಗೀತಳ ಮಗ.


ಇಸ್ರಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ನಾಡಿನೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಯೇಲರ ಮಧ್ಯದಲ್ಲೇ ಇದ್ದಾರೆ.


ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.


ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು.


ದಾವೀದನು ಹೆಬ್ರೋನಿನಲ್ಲಿದ್ದಾಗ ಅವನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು ಇವು: ಅಮ್ನೋನ - ಜೆಸ್ರೀಲಿನ ಅಹೀನೋಮ ಇವನ ತಾಯಿ. ದಾನಿಯೇಲ - ಕರ್ಮೇಲಿನ ಆಬೀಗೈಲಳು ಇವನ ತಾಯಿ.


ಶೆಫಟ್ಯ - ಅಬೀಟಲಳು ಇವನ ತಾಯಿ. ಇತ್ರಾಮ - ಎಗ್ಲಳು ಇವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು