Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:5 - ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿ ಅವನಿಗೆ ಅನೇಕ ಗಂಡುಮಕ್ಕಳು ಹುಟ್ಟಿದರು. ದಾವೀದನ ಹೆಂಡತಿ ಬತ್ಷೂವ ಅಮ್ಮೀಯೇಲನ ಮಗಳು. ಆಕೆ - ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡುಮಕ್ಕಳಿಗೆ ಜನ್ಮವಿತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೂಸಲೇವಿುನಲ್ಲಿರುವಾಗ ಅವನಿಗೆ - ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ವರು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನಿಗೆ ಜೆರುಸಲೇಮಿನಲ್ಲಿ ಹುಟ್ಟಿದ ಮಕ್ಕಳು ಯಾರೆಂದರೆ: ಬತ್ಷೇಬಳ ನಾಲ್ಕು ಮಂದಿ ಮಕ್ಕಳು: ಶಿಮ್ಮ ಶೋಬಾಬ್, ನಾತಾನ್ ಮತ್ತು ಸೊಲೊಮೋನನು. ಬತ್ಷೇಬಳು ಅಮ್ಮೀಯೇಲನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:5
11 ತಿಳಿವುಗಳ ಹೋಲಿಕೆ  

ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು, “ಆಕೆ ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು.


ಎಲಿಯಕೀಮ್ ಮೆಲೆಯಾನಿಗೆ, ಮೆಲೆಯಾ ಮೆನ್ನನಿಗೆ, ಮೆನ್ನ ಮತ್ತಾಥನಿಗೆ, ಮತ್ತಾಥ ನಾತಾನನಿಗೆ, ನಾತಾನ್ ದಾವೀದನಿಗೆ ಹುಟ್ಟಿದರು.


ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್,


ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು.


ಅವನಿಗೆ ಇನ್ನೂ ಒಂಬತ್ತು ಜನ ಗಂಡುಮಕ್ಕಳಿದ್ದರು: ಇಬ್ಹಾರ್, ಎಲೀಷಾಮ, ಎಲೀಫೆಲೆಟ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು