Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:10
56 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಆರಿಸಿಕೊಂಡೆ ನಿನ್ನ ನಿಯಮಗಳನು I ನಿನ್ನ ಕೈ ನೀಡಲಿ ನನಗೆ ನೆರವನು II


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ನಾನಾದರೋ ಮೊರೆಯಿಡುವೆ ದೇವರಿಗೆ I ರಕ್ಷಣೆ ನೀಡದಿರನು ಪ್ರಭು ನನಗೆ II


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.


ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.


ಹರ್ಷಾನಂದವನು ಮೊಳಗಿಸೆನ್ನೊಳು I ಪುಳಕಗೊಳ್ಳುವುವು ನೀ ಮುರಿದೆಲುಬುಗಳು II


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಸಲ್ಲಿಸಿ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.


ಯಾಬೇಚ್ ಎಂಬವನು ಒಬ್ಬನಿದ್ದನು. ಅವನು ತನ್ನ ಕುಟುಂಬದಲ್ಲಿ ಬಹಳ ಗೌರವಾನ್ವಿತ ವ್ಯಕ್ತಿ. ಅವನು ಹುಟ್ಟುವಾಗ ಪ್ರಸವವೇದನೆ ಅಧಿಕವಾಗಿದ್ದರಿಂದ ಅವನ ತಾಯಿ, ಯಾಬೇಚ ಎಂಬ ಹೆಸರನ್ನು ಅವನಿಗೆ ಕೊಟ್ಟಳು.


ಶೂಹನ ಸಹೋದರ ಕೆಲೂಬನಿಗೆ ಮೆಹೀರ ಎಂಬ ಮಗನಿದ್ದನು. ಮೆಹೀರನು ಎಷ್ಟೋನನ ತಂದೆ;


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಮರಳಿ ಬರಮಾಡಿದರೆ ಸರ್ವೇಶ್ವರಸ್ವಾಮಿಯೇ ನನಗೆ ದೇವರು ಆಗುವರು.


ಆ ಪುರುಷ, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಯಕೋಬನು, “ನನ್ನ ಹೆಸರು ಯಕೋಬ” ಎಂದನು.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ಹನ್ನಳು ಏಲಿಗೆ, “ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ.


ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.


ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು