Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:21 - ಕನ್ನಡ ಸತ್ಯವೇದವು C.L. Bible (BSI)

21 ಶೇಲನು ಯೆಹೂದನ ಮಕ್ಕಳಲ್ಲಿ ಒಬ್ಬನು. ಅವನ ವಂಶೀಯರಲ್ಲಿ ಕೆಲವರ ಹೆಸರುಗಳು ಇಂತಿವೆ: ಲೇಕಾಹ್ಯರ ಪಟ್ಟಣದ ಸ್ಥಾಪಕ ಏರ್; ಮರೇಷತ್‍ನ ಸ್ಥಾಪಕ ಲದ್ದ; ಬೇತೆಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೂದನ ಮಗನಾದ ಶೇಲಹನ ಸಂತಾನದವರು: ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೂದನ ಮಗನಾದ ಶೇಲನ ಸಂತಾನದವರು - ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 ಶೇಲನು ಯೆಹೂದನ ಮಗನು. ಶೇಲನ ಮಕ್ಕಳು: ಏರ್, ಲದ್ದ, ಯೊಕೀವ್, ಕೋಜೇಬದ ಜನರು. ಯೋವಾಷ್ ಮತ್ತು ಸಾರಾಫ್. ಏರನ ಮಗನು ಲೇಕಾಹ್ಯ. ಲದ್ದನು ಮರೇಷನ ತಂದೆ ಮತ್ತು ಬೇತಷ್ಬೇಯದ, ಬಟ್ಟೆ ನೇಕಾರರ ಮೂಲಪಿತೃ. ಯೋವಾಷ್ ಮತ್ತು ಸಾರಾಫ್ ಮೋವಾಬ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡು ಬೆತ್ಲೆಹೇಮಿಗೆ ಹಿಂತಿರುಗಿದರು. ಈ ಕುಟುಂಬದ ಕುರಿತಾದ ಬರಹಗಳು ಪುರಾತನ ಕಾಲದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೂದನ ಮಗ ಶೇಲಹನ ಪುತ್ರರು: ಲೇಕಾಹ್ಯನ ತಂದೆ ಏರನು, ಮಾರೇಷನ ತಂದೆ ಲದ್ದ; ಬೇತ್ ಅಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:21
10 ತಿಳಿವುಗಳ ಹೋಲಿಕೆ  

ಮತ್ತೊಮ್ಮೆ ಆಕೆ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಶೇಲಹ’ ಎಂದು ಹೆಸರಿಟ್ಟಳು. ಆಕೆ ಈ ಮಗುವನ್ನು ಹೆರುವಾಗ ಯೆಹೂದನು ಕೆಜೀಬ್ ಊರಿನಲ್ಲಿದ್ದನು.


ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು.


ಯೆಹೂದ ಕುಲದಲ್ಲಿ ಉಳಿದ ಕುಟು೦ಬಗಳು ಇವು - ಶೆಲಹನಿ೦ದ ಶೇಲಾನ್ಯರು, ಪೆರೆಚನಿ೦ದ ಪೆರೆಚ್ಯರು, ಹಾಗು ಜೆರಹನಿ೦ದ ಜೆರಹಿಯರು.


ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.


ಇನ್ನೊಬ್ಬನು ಮಾಸೇಯ; ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಆದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ; ಇವನು ಶೇಲಹನ ಸಂತಾನದವನು.


ಶೀಮೋನನ ಮಕ್ಕಳು - ಅಮ್ನೋನ್, ರಿನ್ನ, ಬಿನ್ಹಾನಾನ್, ತೀಲೋನ್ ಎಂಬವರು. ಇಷ್ಷೀಯ ಮಕ್ಕಳು - ಜೋಹೇತ್, ಬೆನ್‍ಜೋಹೇತ್ ಎಂಬವರು.


ಯೊಕೀಮನು ಹಾಗು ಕೋಜೇಬ ಪಟ್ಟಣಗಳ ನಿವಾಸಿಗಳು; ಮೋವಾಬ್ಯರ ಸ್ತ್ರೀಯರನ್ನು ಮದುವೆಯಾಗಿ ಬೆತ್ಲೆಹೇಮಿನಲ್ಲಿ ನೆಲೆಸಿದ ಯೋವಾಷ ಹಾಗು ಸಾರಾಫ. (ಈ ಸಂಪ್ರದಾಯಗಳು ಬಹಳ ಪುರಾತನವಾದವು).


ಆಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.


ನಯವಾದ ನಾರುಮಡಿಯನ್ನು ಮತ್ತು ಬಿಳೀ ಬಟ್ಟೆಯನ್ನು ನೇಯುವವರೆಲ್ಲ ಹತಾಶರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು