Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:23 - ಕನ್ನಡ ಸತ್ಯವೇದವು C.L. Bible (BSI)

23 ಅವರು ಅರಸನ ಸೇವೆಯಲ್ಲಿ ಕುಂಬಾರರಾಗಿದ್ದು ನೆಟಾಯಿಮ್ ಮತ್ತು ಗೆದೇರ ಪಟ್ಟಣಗಳಲ್ಲಿ ವಾಸಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೇಲೆ ಕಂಡ ಜನರು ಕುಂಬಾರರು; ಅವರು ನೆಟಾಯಿಮ್, ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಶೇಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:23
5 ತಿಳಿವುಗಳ ಹೋಲಿಕೆ  

ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು : I “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು I ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು II


ಮೆಯೋನೋತೈ, ಒಫ್ರಾಹನ ತಂದೆ. ಸೆರಾಯ, ಯೋವಾಬನ ತಂದೆ. ಎಲ್ಲಾ ಕುಶಲ ಕೆಲಸಗಾರರು ವಾಸಿಸಿದ ಶಿಲ್ಪಿಗಳ ಕಣಿವೆಯ ಸ್ಥಾಪಕನು ಇವನೇ.


ಯೊಕೀಮನು ಹಾಗು ಕೋಜೇಬ ಪಟ್ಟಣಗಳ ನಿವಾಸಿಗಳು; ಮೋವಾಬ್ಯರ ಸ್ತ್ರೀಯರನ್ನು ಮದುವೆಯಾಗಿ ಬೆತ್ಲೆಹೇಮಿನಲ್ಲಿ ನೆಲೆಸಿದ ಯೋವಾಷ ಹಾಗು ಸಾರಾಫ. (ಈ ಸಂಪ್ರದಾಯಗಳು ಬಹಳ ಪುರಾತನವಾದವು).


ಸಿಮೆಯೋನನಿಗೆ ನೆಮೂವೇಲ್, ಯಾಮೀನ್, ಯಾರೀದ್, ಜೆರಹ, ಸೌಲ ಎಂಬ ಐವರು ಮಕ್ಕಳಿದ್ದರು.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು