1 ಪೂರ್ವಕಾಲ ವೃತ್ತಾಂತ 4:40 - ಕನ್ನಡ ಸತ್ಯವೇದವು C.L. Bible (BSI)40 ಅಲ್ಲಿಯ ವಿಶಾಲ ಪ್ರದೇಶದಲ್ಲಿ ಸುಖಸಮೃದ್ಧಿಯುಳ್ಳ ಫಲವತ್ತಾದ ಹಸಿರುಗಾವಲು ಭೂಮಿ ಅವರಿಗೆ ದೊರೆಯಿತು. ಇವರಿಗಿಂತ ಮೊದಲು ಅಲ್ಲಿ ಹಾಮ್ಯರ್ ಜನಾಂಗದವರು ನೆಲೆಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅಲ್ಲಿ ಶ್ರೇಷ್ಠವಾದ ಹಸುರುಹುಲ್ಲುಗಾವಲನ್ನು ಕಂಡರು. ದೇಶವು ಎಲ್ಲಾ ಕಡೆಗಳಲ್ಲಿಯೂ ವಿಸ್ತಾರವಾಗಿದ್ದು ಸುಖಸಮಾಧಾನಗಳಿಂದಿತ್ತು; ಅಲ್ಲಿ ಪೂರ್ವದಿಂದ ವಾಸವಾಗಿದ್ದವರು ಹಾಮ್ಯರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅವರು ರಸವತ್ತಾದ ಒಳ್ಳೆಯ ಮೇವನ್ನು ಕಂಡುಕೊಂಡರು. ಆ ದೇಶವು ವಿಸ್ತಾರವಾಗಿಯೂ, ಶಾಂತವಾಗಿಯೂ, ಸಮಾಧಾನವಾಗಿಯೂ ಇತ್ತು. ಪೂರ್ವದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |