1 ಪೂರ್ವಕಾಲ ವೃತ್ತಾಂತ 5:1 - ಕನ್ನಡ ಸತ್ಯವೇದವು C.L. Bible (BSI)1 ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲನಾಗಿದ್ದರೂ ಅವನು ತನ್ನ ತಂದೆಯ ಹಾಸಿಗೆಯನ್ನು ಹೊಲೆಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1-3 ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲಿನ ಚೊಚ್ಚಲಮಗನಾದ ರೂಬೇನನ ಪುತ್ರರು ಇವರು: ಅವನು ಚೊಚ್ಚಲ ಮಗನಾಗಿದ್ದನು. ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರ ಮಾಡಿದ್ದರಿಂದ ಅವನ ಚೊಚ್ಚಲುತನದ ಹಕ್ಕು ಇಸ್ರಾಯೇಲಿನ ಮಗ ಯೋಸೇಫನ ಪುತ್ರರಿಗೆ ಕೊಡಲಾಗಿತ್ತು. ಆದ್ದರಿಂದ ಈ ವಂಶಾವಳಿಯು ಚೊಚ್ಚಲುತನದ ಪ್ರಕಾರ ಬರೆದಿರುವುದಿಲ್ಲ. ಅಧ್ಯಾಯವನ್ನು ನೋಡಿ |