Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:2 - ಕನ್ನಡ ಸತ್ಯವೇದವು C.L. Bible (BSI)

2 ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಪ್ರಬಲನಾದದರಿಂದಲೂ ರಾಜ್ಯಾಧಿಕಾರವು ಇವನ ಕುಲಕ್ಕೆ ಬಂದದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲನೆಂದು ಲಿಖಿತನಾಗಲಿಲ್ಲ; ಆದರೂ ಚೊಚ್ಚಲನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:2
25 ತಿಳಿವುಗಳ ಹೋಲಿಕೆ  

‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II


ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣ ನನಗೆ I ಜೂದಕುಲ ರಾಜದಂಡವಾಗಿದೆ ನನ್ನ ಕೈಗೆ II


ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.


ಹೀಗೆ ಜೆಸ್ಸೆಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನೂ ಅವನ ಬಳಿಗೆ ಬರಮಾಡಿದರೂ ಅವನು, “ಸರ್ವೇಶ್ವರ ಇವರನ್ನು ಆರಿಸಿಕೊಳ್ಳಲಿಲ್ಲ,” ಎಂದು ನುಡಿದನು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


“ಯೆಹೂದ ಕುಲ ಹೋಗಲಿ; ಇಗೋ, ನಾಡನ್ನು ಅವರ ಕೈಗೆ ಒಪ್ಪಿಸಿದ್ದೇನೆ,” ಎಂದರು ಸರ್ವೇಶ್ವರ.


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.


ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.


“ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.


ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ಅದಕ್ಕೆ ಯಕೋಬ, ‘ನಿನ್ನದಾಗಿರುವ ಜ್ಯೇಷ್ಠಪುತ್ರನ ಹಕ್ಕನ್ನು ನನಗೆ ಮೊದಲು ಮಾರಿಬಿಡು,’ ಎಂದು ಹೇಳಿದ.


“ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.


“ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು