Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:21 - ಕನ್ನಡ ಸತ್ಯವೇದವು C.L. Bible (BSI)

21 ಅವರು ವೈರಿಗಳಿಂದ ಐವತ್ತು ಸಾವಿರ ಒಂಟೆಗಳನ್ನೂ ಎರಡು ಲಕ್ಷ ಐವತ್ತು ಸಾವಿರ ಕುರಿಗಳನ್ನೂ ಎರಡು ಸಾವಿರ ಕತ್ತೆಗಳನ್ನೂ ವಶಪಡಿಸಿಕೊಂಡರಲ್ಲದೆ, ಒಂದು ಲಕ್ಷ ಜನರನ್ನು ಯುದ್ಧಕೈದಿಗಳನ್ನಾಗಿ ಸೆರೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರಿಂದ ನಿಯವಿುತವಾದ ಈ ಯುದ್ಧದಲ್ಲಿ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ವೈರಿಗಳಿಂದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಐವತ್ತು ಸಾವಿರ ಒಂಟೆಗಳನ್ನು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳನ್ನು, ಎರಡು ಸಾವಿರ ಕತ್ತೆಗಳನ್ನು ಅಲ್ಲದೆ, ಒಂದು ಲಕ್ಷ ಜನರನ್ನು ಯುದ್ಧ ಕೈದಿಗಳನ್ನಾಗಿ ಸೆರೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:21
7 ತಿಳಿವುಗಳ ಹೋಲಿಕೆ  

ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಯುದ್ಧವು ದೇವರ ಚಿತ್ತಾನುಸಾರವಾದದ್ದರಿಂದ ಅವರು ಅನೇಕ ವೈರಿಗಳನ್ನು ಸಂಹರಿಸಿದರು ಮತ್ತು ತಾವು ಸೆರೆಯಾಗಿ ಹೋಗುವ ಕಾಲದವರೆಗೆ ಅಲ್ಲಿಯೇ ನೆಲೆಸಿದರು.


ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.


ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.


ದನಕಾಯುವವರ ಗುಡಾರಗಳ ಮೇಲೆ ದಾಳಿಮಾಡಿ ಎಷ್ಟೋ ಒಂಟೆಕುರಿಗಳನ್ನು ಜೆರುಸಲೇಮಿಗೆ ಹೊಡೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು