Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:34 - ಕನ್ನಡ ಸತ್ಯವೇದವು C.L. Bible (BSI)

34 ಎಲ್ಕಾನ, ಯೆರೋಹಾಮ, ಎಲೀಯೇಲ, ತೋಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಗಾಯಕನಾದ ಇವನು ಯೋವೇಲನ ಮಗನು; ಇವನು ಸಮುವೇಲನ ಮಗನು; ಇವನು ಎಲ್ಕಾನನ ಮಗನು; ಇವನು ಯೆರೋಹಾಮನ ಮಗನು; ಇವನು ಎಲೀಯೇಲನ ಮಗನು; ಇವನು ತೋಹನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಸಮುವೇಲನು ಎಲ್ಕಾನನ ಮಗ. ಎಲ್ಕಾನನು ಯೆರೋಹಾಮನ ಮಗ. ಯೆರೋಹಾಮನು ಎಲೀಯೇಲನ ಮಗ. ಎಲೀಯೇಲನು ತೋಹನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವನು ಎಲ್ಕಾನನ ಮಗನು, ಅವನು ಯೆರೋಹಾಮನ ಮಗನು, ಅವನು ಎಲೀಯೇಲನ ಮಗನು, ಅವನು ತೋಹನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:34
13 ತಿಳಿವುಗಳ ಹೋಲಿಕೆ  

ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.


ಆರೋನನ ವಂಶಜರಾದ ಯಾಜಕರು ಬಲಿಪೀಠದ ಮೇಲೆ ಬೆಂಕಿಯನ್ನಿಟ್ಟು


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದೊಳಗೆ ಹೋಗಕೂಡದು. ಹಾಗೆ ತನ್ನ ಹಾಗು ಮನೆತನದವರ ಪರವಾಗಿ ಮತ್ತು ಇಸ್ರಯೇಲರ ಇಡೀ ಸಮಾಜದ ಪರವಾಗಿ ಪ್ರಾಯಶ್ಚಿತ್ತ ಮಾಡುವನು.


ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಯೇಲರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.


ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.


ಆರೋನ್ಯರು ಈ ವರ್ಗಕ್ರಮದಲ್ಲಿ ಸರ್ವೇಶ್ವರನ ಆಲಯಕ್ಕೆ ಬಂದು, ಲೇವಿಯರ ಮೂಲ ಪುರುಷನಾದ ಆರೋನನ ಮುಖಾಂತರ ಇಸ್ರಯೇಲ್ ದೇವರಾದ ಸರ್ವೇಶ್ವರ ನಿಯಮಿಸಿದ ಸೇವೆಯನ್ನು ನಡೆಸಬೇಕಾಗಿತ್ತು.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು