1 ಪೂರ್ವಕಾಲ ವೃತ್ತಾಂತ 6:44 - ಕನ್ನಡ ಸತ್ಯವೇದವು C.L. Bible (BSI)44 ಮೆರಾರೀ ಕುಟುಂಬದ ಏತಾನ ತೃತೀಯ ಸಂಗೀತಮಂಡಳಿಯ ನಾಯಕ. ಅವನ ಪೂರ್ವಜರ ವಂಶಾವಳಿ ಲೇವಿಯವರೆಗೆ ಹೀಗಿದೆ: ಏತಾನ, ಕೀಷೀ, ಅಬ್ದೀಯ, ಮಲ್ಲೂಕ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ ಮೆರಾರೀಯನೂ ಆದ ಏತಾನನು [ಮೂರನೆಯವನು]. ಇವನು ಕೀಷೀಯ ಮಗನು; ಇವನು ಅಬ್ದೀಯ ಮಗನು; ಇವನು ಮಲ್ಲೂಕನ ಮಗನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಮೆರಾರೀಯ ಸಂತತಿಯವರು ಹೇಮಾನ ಮತ್ತು ಅಸಾಫನ ಸಂಬಂಧಿಕರು. ಇವರು ಹೇಮಾನನ ಎಡಗಡೆಯಲ್ಲಿ ನಿಂತು ಹಾಡುವ ಗಾಯಕರು. ಏತಾನನು ಕೀಷೀಯ ಮಗ. ಕೀಷೀಯು ಅಬ್ದೀಯ ಮಗ. ಅಬ್ದೀಯ ಮಲ್ಲೂಕನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅವರ ಸಹೋದ್ಯೋಗಿ ಮೆರಾರೀಯ ಪುತ್ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಅವನು ಅಬ್ದೀಯ ಮಗನು, ಅವನು ಮಲ್ಲೂಕನ ಮಗನು, ಅಧ್ಯಾಯವನ್ನು ನೋಡಿ |
ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.