Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಲ್ಲಾ ಇಸ್ರಾಯೇಲ್ಯರು ವಂಶಾವಳಿಗಳಲ್ಲಿ ಲಿಖಿತರಾದರು; ಅವರ ಹೆಸರುಗಳು ಇಸ್ರಾಯೇಲ್ಯರ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ. ಯೆಹೂದ್ಯರು ದೇವದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:1
22 ತಿಳಿವುಗಳ ಹೋಲಿಕೆ  

ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕಾ ಸೇವೆಯಿಂದ ಬಹಿಷ್ಕೃತರಾದರು.


ಹೀಗಿರಲು, ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನು, ಅಧಿಕಾರಿಗಳನ್ನು ಹಾಗು ಜನಸಾಮಾನ್ಯರನ್ನು ಜನಗಣತಿಗಾಗಿ ಸಭೆಸೇರಿಸಿದೆ. ಆಗ ಜೆರುಸಲೇಮಿಗೆ ಮೊದಲು ಹಿಂದಿರುಗಿ ಬಂದವರ ಹೆಸರುಗಳ ಪಟ್ಟಿ ನನಗೆ ಸಿಕ್ಕಿತು. ಅದರಲ್ಲಿ ಹೀಗೆ ಬರೆದಿತ್ತು:


ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ಇದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ರುಜುಪಡಿಸಲು ಆಗದವರಲ್ಲಿ


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಊಲಾಮನ ಮಕ್ಕಳು ಶೂರಸೈನಿಕರೂ ಬಿಲ್ಲುವಿದ್ಯೆಯಲ್ಲಿ ಪರಿಣಿತರೂ ಆಗಿದ್ದರು. ಅವನಿಗೆ ಒಟ್ಟು ಒಂದುನೂರ ಐವತ್ತು ಮಂದಿ ಮಕ್ಕಳು ಮೊಮ್ಮಕ್ಕಳೂ ಇದ್ದರು. ಇವರೆಲ್ಲರೂ ಬೆನ್ಯಾಮೀನ್ ಗೋತ್ರದವರು.


ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.


ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,


ಏಳು ಸಾವಿರ ಮಂದಿ ಯೋಧರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಜೆರುಸಲೇಮಿನಿಂದ ಬಾಬಿಲೋನಿಗೆ ಒಯ್ದನು. ಅವರೆಲ್ಲರು ಪುಷ್ಟರೂ ರಣವೀರರೂ ಆಗಿದ್ದರು.


ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:


ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.


ಧೀರರು ಮತ್ತು ಯೋಧರು, ನ್ಯಾಯಾಧಿಪತಿಗಳು ಮತ್ತು ಪ್ರವಾದಿಗಳು, ಶಕುನದವರು ಮತ್ತು ಶಾಸಕರು,


ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು