Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:2 - ಕನ್ನಡ ಸತ್ಯವೇದವು C.L. Bible (BSI)

2 ಪಟ್ಟಣಗಳಲ್ಲಿದ್ದ ತಮ್ಮ ಸೊತ್ತುಗಳಿಗೆ ಹಿಂದಿರುಗಿ ಬಂದವರಲ್ಲಿ ಇಸ್ರಯೇಲಿನ ಜನಸಾಮಾನ್ಯರೂ ಯಾಜಕರೂ ಲೇವಿಯರೂ ದೇವಾಲಯದ ಕೆಲಸದವರೂ ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಅವರ ಪಟ್ಟಣಗಳನ್ನೂ ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು, ಲೇವಿಯರು, ದೇವಸ್ಥಾನದಾಸರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:2
11 ತಿಳಿವುಗಳ ಹೋಲಿಕೆ  

ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಜನಸಾಮಾನ್ಯರು, ದೇವಸ್ಥಾನದ ಪರಿಚಾರಕರು ಅಂತೂ ಇಸ್ರಯೇಲರೆಲ್ಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಹಾಗು ದಾವೀದನೂ ಅವನ ಸರದಾರರೂ ಲೇವಿಯರ ಸಹಾಯಕ್ಕಾಗಿ ಕೊಟ್ಟ ದೇವಸ್ಥಾನ ಪರಿಚಾರಕರಲ್ಲಿ ಇನ್ನೂರ ಇಪ್ಪತ್ತು ಮಂದಿಯನ್ನು ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.


ಹೀಗೆ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದೇವಸ್ಥಾನದ ಪರಿಚಾರಕರು, ಜನಸಾಮಾನ್ಯರಲ್ಲಿ ಕೆಲವರು, ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು. ಉಳಿದ ಎಲ್ಲ ಇಸ್ರಯೇಲರು ತಮ್ಮ ತಮ್ಮ ಪಟ್ಟಣಗಳಲ್ಲೇ ವಾಸಿಸಿದರು.


ದೇವಸ್ಥಾನದ ಎಲ್ಲ ಸೇವಕರು, ಸೊಲೊಮೋನನ ಆಳುಗಳು ಒಟ್ಟು 392 ಮಂದಿ.


ದೇವಸ್ಥಾನದ ಪರಿಚಾರಕರಲ್ಲಿ - ಜೀಹ, ಹಸೂಫ,


ಎಲ್ಲಾ ದೇವಸ್ಥಾನ ಪರಿಚಾರಕರು ಹಾಗು ಸೊಲೊಮೋನನ ಸೇವಕರು ಒಟ್ಟು -392 ಮಂದಿ.


ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು