Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:27 - ಕನ್ನಡ ಸತ್ಯವೇದವು C.L. Bible (BSI)

27 ದೇವಾಲಯವನ್ನು ಕಾಯುವುದೂ ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುವುದೂ ಅವರ ಕರ್ತವ್ಯವಾಗಿತ್ತು. ಆದುದರಿಂದ ಅವರು ದೇವಾಲಯದ ಹತ್ತಿರವೇ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರು ರಾತ್ರಿಯಲ್ಲಿಯೂ ದೇವಾಲಯದ ಸುತ್ತಲೂ ಇಳುಕೊಂಡು ಅವುಗಳನ್ನು ಕಾಯುತ್ತಿದ್ದರು; ಪ್ರತಿದಿನ ಬೆಳಿಗ್ಗೆ ಅವುಗಳನ್ನು ತೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವರು ರಾತ್ರಿಯಲ್ಲಿ ಕಾವಲು ಕಾಯುತ್ತಿದ್ದರು ಮತ್ತು ಪ್ರತಿಮುಂಜಾನೆ ದೇವಾಲಯದ ಬಾಗಿಲನ್ನು ತೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ದೇವರ ಆಲಯದ ಸುತ್ತಲೂ ರಾತ್ರಿಯನ್ನು ಕಳೆಯುತ್ತಿದ್ದರು, ಏಕೆಂದರೆ ಅವರು ಅದನ್ನು ಕಾವಲು ಕಾಯಬೇಕಾಗಿತ್ತು. ಮತ್ತು ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:27
8 ತಿಳಿವುಗಳ ಹೋಲಿಕೆ  

ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು.


ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು.


ಪೂಜಾಸಾಮಗ್ರಿಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಇತರ ಲೇವಿಯರದಾಗಿತ್ತು. ಅವುಗಳನ್ನು ಕೊಡುವಾಗಲೂ ಮರಳಿ ತೆಗೆದುಕೊಳ್ಳುವಾಗಲೂ ಲೆಕ್ಕಿಸುತ್ತಿದ್ದರು.


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು