Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:12 - ಕನ್ನಡ ಸತ್ಯವೇದವು C.L. Bible (BSI)

12 ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:12
56 ತಿಳಿವುಗಳ ಹೋಲಿಕೆ  

ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು.


ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.


ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಆದುದರಿಂದಲೇ ರೋಮ್ ನಗರದಲ್ಲಿರುವ ನಿಮಗೂ ಶುಭಸಂದೇಶವನ್ನು ಸಾರಲು ನಾನು ಆತುರದಿಂದ ಎದುರುನೋಡುತ್ತಿದ್ದೇನೆ.


ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.


ಪೇತ್ರನು ಮಾತನಾಡುತ್ತಿದ್ದಂತೆ ಅವನ ಉಪದೇಶವನ್ನು ಕೇಳುತ್ತಿದ್ದ ಎಲ್ಲರ ಮೇಲೆ ಪವಿತ್ರಾತ್ಮ ಇಳಿದುಬಂದರು.


ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು