Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:17 - ಕನ್ನಡ ಸತ್ಯವೇದವು C.L. Bible (BSI)

17 ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಂಚ್ಯಾ ತೆಂಚ್ಯಾ ಕರ್ನ್ಯಾಂಚ್ಯಾ ಸಾರ್ಕೆ ತಿರ್ಮಾನ್ ಕರ್ತಲ್ಯಾ ದೆವಾಕ್ ತುಮಿ ಬಾಬಾ ಮನುನ್ ಬಲ್ವುಲ್ಯಾಸಿ, ತಸೆ ಹೊಲ್ಯಾರ್, ಹ್ಯಾ ಭಾಯ್ಲ್ಯಾ ಗಾಂವಾತ್ ತುಮಿ ತುಮ್ಚೆ ಭಕ್ತಿಚೆ ಅನಿ ದೆವಸ್ಪಾನಾಚೆ ಜಿವನ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:17
33 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಈ ಕಾರಣದಿಂದಲೇ ನಾವು ಸದಾ ಸ್ಥಿರಚಿತ್ತರಾಗಿದ್ದೇವೆ. ಈ ದೇಹವನ್ನೇ ನೆಚ್ಚಿ ಇದರಲ್ಲೇ ನೆಲೆಯಾಗಿರುವವರೆಗೂ ನಾವು ಪ್ರಭುವಿನಿಂದ ದೂರವಿರುವ ಪ್ರವಾಸಿಗಳಂತೆ ಇದ್ದೇವೆ.


ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಆಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು