Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:19 - ಕನ್ನಡ ಸತ್ಯವೇದವು C.L. Bible (BSI)

19 ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಎಕ್ ಲೈ ಕಿಮ್ತಿಂಚ್ಯಾ ಕಾಯ್ಬಿ ಕಳಂಕ್ ನಸಲ್ಲ್ಯಾ ಬಲಿಚ್ಯಾ ಬೊಕ್ಡಾಚ್ಯಾ ವೈನಾ ಮಟ್ಲ್ಯಾರ್, ಕ್ರಿಸ್ತಾಚ್ಯಾ ಬಲಿ ವೈನಾ ಮನ್ತಲೆ ಗೊತ್ತ್ ಹಾಯ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:19
31 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ,” ಎಂದು ಹೇಳಿದನು.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಕುಂದುಕೊರತೆ ಇರುವಂಥದನ್ನು ಒಪ್ಪಿಸಬಾರದು; ಅದು ಸ್ವೀಕೃತವಾಗುವುದಿಲ್ಲ.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದಕುರಿ,


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು