Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:20 - ಕನ್ನಡ ಸತ್ಯವೇದವು C.L. Bible (BSI)

20 ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಜಗದುತ್ಪತ್ತಿಗೆ ಮೊದಲೇ ಗೊತ್ತು ಮಾಡಲ್ಪಟ್ಟು ಅಂತ್ಯಕಾಲದಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಲೋಕವು ಸೃಷ್ಟಿಯಾಗುವುದಕ್ಕೆ ಮೊದಲೇ ಕ್ರಿಸ್ತನು ಆರಿಸಲ್ಪಟ್ಟನು. ಆದರೆ ಆತನು ನಿಮಗೋಸ್ಕರ ಈ ಅಂತ್ಯಕಾಲದಲ್ಲಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಕಾ ಜಗ್ ರಚುಚ್ಯಾ ಅದ್ದಿಚ್ಯಾನುಚ್ ದೆವಾನ್ ಎಚುನ್ ಕಾಡಲ್ಲ್ಯಾನ್, ಅನಿ ಹ್ಯಾ ಆಕ್ರಿಚ್ಯಾ ಯೆಳಾರ್ ತುಮ್ಚೆಸಾಟ್ನಿ ತೆಕಾ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:20
27 ತಿಳಿವುಗಳ ಹೋಲಿಕೆ  

ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೆ ಜಗದುತ್ಪತ್ತಿಗೆ ಮುಂಚೆಯೇ, ಅನಾದಿಕಾಲದಲ್ಲೆ.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು