Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:21 - ಕನ್ನಡ ಸತ್ಯವೇದವು C.L. Bible (BSI)

21 ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಚೆ ವೈನಾ ತೆಕಾ ಝಿತ್ತೊ ಕರುನ್ ಉಟ್ವುನ್ ಅಪ್ನಾಚಿ ಮಹಿಮಾ ದಿಲ್ಲ್ಯಾ ದೆವಾ ವರ್ತಿ ತುಮಿ ವಿಶ್ವಾಸ್ ಕರುಕ್ ಪಾವ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:21
34 ತಿಳಿವುಗಳ ಹೋಲಿಕೆ  

ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


“ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.


ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಕ್ರಿಸ್ತಯೇಸುವಿಗೂ ಸೈತಾನನಿಗೂ ಎಲ್ಲಿಯ ನಂಟು? ವಿಶ್ವಾಸಿಗೂ ಅವಿಶ್ವಾಸಿಗೂ ಎಲ್ಲಿಯ ಸಹವಾಸ?


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು