Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:22 - ಕನ್ನಡ ಸತ್ಯವೇದವು C.L. Bible (BSI)

22 ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅತ್ತಾ ಖರ್‍ಯಾಕ್ ತುಮಿ ಖಾಲ್ತಿ ಹೊಲ್ಲ್ಯಾ ಸಾಟ್ನಿ ತುಮ್ಚೆ ಆತ್ಮೆ ನಿತಳ್ ಹೊಲ್ಲೆ ಹಾಸಿ, ಅನಿ ತುಮ್ಚ್ಯಾ ಭಾವಾ-ಭೆನಿಯಾಂಚ್ಯಾ ಮದ್ದಿ ಎಕ್ ನಿತಳ್ ಪ್ರೆಮ್ ತುಮ್ಚ್ಯಾ ಭುತ್ತುರ್ ಉಗಡಲ್ಲೊ ಹಾಯ್, ತಸೆ ಮನುನ್ ಸಗ್ಳ್ಯಾ ಮನಾನ್, ಅನಿ ಸೊಡಿನಾಸ್ತಾನಾ ಎಕಾಮೆಕಾಚೊ ಪ್ರೆಮ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:22
51 ತಿಳಿವುಗಳ ಹೋಲಿಕೆ  

ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು.


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.


ವೃದ್ಧೆಯರೊಡನೆ ಮಾತೃಭಾವನೆಯಿಂದ ನಡೆದುಕೋ. ಯುವತಿಯರನ್ನು ಅಕ್ಕತಂಗಿಯರೆಂದು ಪರಿಗಣಿಸಿ, ಪರಿಶುದ್ಧ ಭಾವನೆಯಿಂದ ನಡೆದುಕೋ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?


ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.


ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು