Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:23 - ಕನ್ನಡ ಸತ್ಯವೇದವು C.L. Bible (BSI)

23 ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಶ್ಯಾಕ್ ಮಟ್ಲ್ಯಾರ್, ಶ್ವಾಸಾತ್ ಝಿತ್ತೊ ರಾತಲ್ಯಾ ದೆವಾಚ್ಯಾ ಗೊಸ್ಟಿಚ್ಯಾ ವೈನಾ ತುಮ್ಕಾ ನ್ಹವೊ ಜಲಮ್ ಗಾವ್ಲಾ, ಹ್ಯೊ ಜಲಮ್ ತುಮ್ಕಾ ನಾಸ್ ಹೊವ್ನ್ ಜಾತಲ್ಯಾ ಮಾನ್ಸಾಕ್ನಾ ನ್ಹಯ್, ನಾಸ್ ಹೊವ್ನ್ ಜಾಯ್ ನಸಲ್ಲ್ಯಾ ದೆವಾಕ್ನಾ ಗಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:23
18 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.


ಅಮರದೇವರನ್ನು ಆರಾಧಿಸುವುದನ್ನು ಬಿಟ್ಟು ಅಳಿದುಹೋಗುವಂಥ ನರಮಾನವರ, ಪ್ರಾಣಿಪಕ್ಷಿಗಳ, ಸರ್ಪಾದಿಗಳ ವಿಗ್ರಹಗಳನ್ನು ಮಾಡಿ ಆರಾಧಿಸತೊಡಗಿದರು.


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


“ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.


ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು