Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:25 - ಕನ್ನಡ ಸತ್ಯವೇದವು C.L. Bible (BSI)

25 ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕರ್ತನ ಮಾತೋ ಸದಾಕಾಲವೂ ಇರುವದು ಎಂದು ಹೇಳಿದೆಯಷ್ಟೆ. ಆ ಮಾತು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ದೇವರ ವಾಕ್ಯವು ಎಂದೆಂದಿಗೂ ಜೀವಂತವಾಗಿರುತ್ತದೆ.” ನಿಮಗೆ ಈ ವಾಕ್ಯವನ್ನೇ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು.” ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ದೆವಾಚಿ ಗೊಸ್ಟ್ ಸದಾಸರ್ವಾತಾಕ್ ತುಮ್ಚ್ಯಾ ವಾಂಗ್ಡಾ ರಾತಾ ಮನುನ್ ಸಾಂಗಲ್ಲೆ ಹಾಯ್, ತಿ ಗೊಸ್ಟ್ ಖಲಿ ಮಟ್ಲ್ಯಾರ್, ತುಮ್ಕಾ ಪರ್ಗಟ್ ಕರುನ್ ಹೊಲ್ಲಿ ಬರಿ ಖಬರುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:25
23 ತಿಳಿವುಗಳ ಹೋಲಿಕೆ  

ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.”


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಹೇ ಪ್ರಭು, ನಿನ್ನ ವಾಕ್ಯ ಶಾಶ್ವತ I ಪರಲೋಕದಲಿ ಅದು ಚಿರ ಶಾಶ್ವತ II


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


“ಭೂಮ್ಯಾಕಾಶಗಳು ಅಳಿದುಹೋಗಬಹುದು. ಆದರೆ ಧರ್ಮಶಾಸ್ತ್ರದಲ್ಲಿನ ಒಂದು ಚುಕ್ಕೆಯೂ ನಿರರ್ಥಕವಾಗದು.


ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.


ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.


ದೇವರ ವಾಕ್ಯದ ಸವಿಯುಂಡು, ಬರಲಿರುವ ಯುಗದ ವೈಭವವನ್ನು ಮನಗಂಡು,


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು