Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:3 - ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಚಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಚೆ ಸುತ್ತಿ ಹೊಂವ್ದಿತ್, ತೆನಿ ಅಪ್ನಾಚ್ಯಾ ಮೊಟ್ಯಾ ದಯೆನ್, ಜೆಜು ಕ್ರಿಸ್ತಾಚ್ಯಾ ಝಿತ್ತೊ ಹೊವ್ನ್ ಉಟ್ತಲ್ಯಾಚ್ಯಾ ವೈನಾ ಅಮ್ಕಾ ಎಕ್ ಝಿತ್ತ್ಯಾ ಬರೊಸ್ಯಾತ್ ನ್ಹವ್ಯಾನ್ ಉಪ್ಜಿ ಸಾರ್ಕೆ ಕರ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:3
56 ತಿಳಿವುಗಳ ಹೋಲಿಕೆ  

ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಪ್ರಾಚೀನಕಾಲದ ದೈವಭಕ್ತೆಯರಾದ ಸ್ತ್ರೀಯರು ಹೀಗೆಯೇ ಸಿಂಗರಿಸಿಕೊಂಡು ತಮ್ಮ ತಮ್ಮ ಪತಿಯರಿಗೆ ವಿಧೇಯರಾಗಿದ್ದರು.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು