Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:4 - ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮ್ಮನ್ನು ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಯನ್ನು ಎದುರುನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಸರ್ಗಾರ್ ತಯಾರ್ ಕರಲ್ಲ್ಯಾ ಎಕ್ ನಾಸ್ ಹೊಯ್ ನಸಲ್ಲ್ಯಾ, ದೊಸ್ ನಸಲ್ಲ್ಯಾ, ಅನಿ ವಾಳಿ ನಸಲ್ಲ್ಯಾ ಆಸ್ತಿಸಾಟ್ನಿ ಅಮ್ಕಾ ತಯಾರ್ ಕರ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:4
27 ತಿಳಿವುಗಳ ಹೋಲಿಕೆ  

ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ದೇವರು ನಮಗೆ ಹಕ್ಕುಬಾಧ್ಯತೆಯಾಗಿ ಕೊಡುವುದು ಧರ್ಮಶಾಸ್ತ್ರದಿಂದ ಲಭಿಸುವುದಾದರೆ ಅದು ಇನ್ನು ದೇವವಾಗ್ದಾನದಿಂದ ಲಭಿಸದು ಎಂದಂತಾಯಿತು. ಆದರೆ ದೇವರು ಅದನ್ನು ಅಬ್ರಹಾಮನಿಗೆ ದಯಪಾಲಿಸಿದ್ದು ವಾಗ್ದಾನದ ಮೂಲಕವೇ.


ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.


ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು