Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:6 - ಕನ್ನಡ ಸತ್ಯವೇದವು C.L. Bible (BSI)

6 ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಸದ್ಯಕ್ಕೆ ಸ್ವಲ್ಪಕಾಲ ದೇವರ ಚಿತ್ತಾನುಸಾರ ನಾನಾ ಕಷ್ಟಗಳಲ್ಲಿದ್ದು ದುಃಖಿಸುವವರಾಗಿದ್ದರೂ ಆ ಪದವಿಯನ್ನು ಆಲೋಚಿಸಿ ಹರ್ಷಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚೆಸಾಟ್ನಿ ತುಮಿ ಖುಶಿ ಹೊವಾ, ಅತ್ತಾ ಎಕ್ ಉಲ್ಲೊ ಎಳ್ ತುಮ್ಕಾ ಕಸ್ಟ್ ಸೊಸುಕ್ ಗಾವ್ತಾ ಹೊಲ್ಯಾರ್ಬಿ ಕಾಯ್ ಹೊಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:6
47 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ದುಃಖದಿಂದ ಸೊರಗಿಹೋಗಿದೆ ಎನ್ನಮನ I ನಿನ್ನ ವಾಕ್ಯಾನುಸಾರ ನೀಡು ಸಾಂತ್ವನ II


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ. ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಆನಂದಿಸಲಿ.


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ.


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ನಿಮ್ಮನ್ನೆಲ್ಲಾ ನೋಡಲು ಅವನು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮ್ಮ ಕಿವಿಗೆ ಮುಟ್ಟಿತೆಂದು ತಿಳಿದು ಬಹಳ ವ್ಯಸನಪಡುತ್ತಿದ್ದಾನೆ.


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು