Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:10 - ಕನ್ನಡ ಸತ್ಯವೇದವು C.L. Bible (BSI)

10 ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಎಕ್ ಯೆಳಾರ್ ತುಮ್ಕಾ ಗೊತ್ತ್ ನತ್ತೆ ಖರೆ ಅತ್ತಾ ತುಮಿ ದೆವಾಚಿ ದಯಾ ಘೆಟ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:10
10 ತಿಳಿವುಗಳ ಹೋಲಿಕೆ  

ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.”


ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.


ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು