Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:12 - ಕನ್ನಡ ಸತ್ಯವೇದವು C.L. Bible (BSI)

12 ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತುಮ್ಚಿ ಚಾಲ್ ಚಲ್ನ್ಯಾಕ್ ಬರಿ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್, ಖಲ್ಯಾ ಸಂಗ್ತಿಯಾಚ್ಯಾ ವಿಶಯಾತ್ ತೆನಿ ತುಮಿ ಚುಕಿದಾರ್ ಮನುನ್ ಮನ್ತಾತ್ ಅನಿ ತುಮ್ಚೆರ್ ಚುಕ್ ವಾವ್ತಾತ್ ತ್ಯಾಚ್ ವಿಶಯಾಂಚ್ಯಾ ವೈನಾ ತುಮ್ಚಿ ಬರಿ ಕಾಮಾ ಬಗುನ್ ತೆಚ್ಯಾ ಯೆನ್ಯಾಚ್ಯಾ ದಿಸಿ ದೆವಾಚಿ ತೆನಿ ಹೊಗ್ಳಾಪ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:12
46 ತಿಳಿವುಗಳ ಹೋಲಿಕೆ  

ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ನಮಗಾಗಿಯೂ ಪ್ರಾರ್ಥಿಸಿರಿ. ಎಲ್ಲಾ ವಿಷಯಗಳಲ್ಲಿ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುದೇ ನಮ್ಮ ಅಪೇಕ್ಷೆ. ನಮ್ಮ ಮನಸ್ಸಾಕ್ಷಿ ಶುದ್ಧವಾಗಿದೆಯೆಂಬ ದೃಢನಂಬಿಕೆ ನಮಗಿದೆ.


ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ನೀವು ಯಾವ ಕೇಡನ್ನೂ ಮಾಡಬಾರದೆಂದು ದೇವರಲ್ಲಿ ನಾವು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವು ಮಾತ್ರ ಯೋಗ್ಯರೆಂದು ತೋರಿಸಿಕೊಳ್ಳುವ ಉದ್ದೇಶ ನಮಗಿಲ್ಲ. ನಾವು ಅಯೋಗ್ಯರೆನಿಸಿಕೊಂಡಿದ್ದರೂ ನೀವು ಒಳಿತನ್ನೇ ಮಾಡಬೇಕೆಂಬುದು ನಮ್ಮ ಉದ್ದೇಶ.


ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.


ಇವರು ಈಗ ನನ್ನ ಮೇಲೆ ಹೊರಿಸುವ ಆಪಾದನೆಗಳನ್ನು ತಮ್ಮ ಮುಂದೆ ಸಮರ್ಥಿಸಲು ಇವರಿಂದಾಗದು.


ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.


ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.


ಯೂದನು ಹೊರಟುಹೋದಮೇಲೆ ಯೇಸು ಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು.


ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.


ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು