Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:15 - ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಿಳಿಯದೆ ಮಾತಾಡುವ ಮೂಢಜನರ ಬಾಯನ್ನು ನೀವು ಒಳ್ಳೇ ನಡತೆಯಿಂದ ಕಟ್ಟಬೇಕೆಂಬದೇ ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಒಳ್ಳೆಯದನ್ನು ಮಾಡುವಾಗ ನಿಮ್ಮನ್ನು ಕುರಿತು ಕೆಟ್ಟಮಾತುಗಳನ್ನು ಆಡಲು ಮೂಢರಿಗೆ ಸಾಧ್ಯವಾಗುವುದಿಲ್ಲ. ದೇವರ ಅಪೇಕ್ಷೆಯೂ ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕಶ್ಯಾಕ್ ಮಟ್ಲ್ಯಾರ್, ಬುದ್ದ್ ನಸಲ್ಲ್ಯಾ ಲೊಕಾಕ್ನಿ ಬೊಲಿನಸ್ತಾನಾ ರ್‍ಹಾಯ್‌ ಸಾರ್ಕೆ ತುಮ್ಚ್ಯಾ ಬರ್‍ಯಾ ಚಲ್ನುಕಿ ವೈನಾ ತುಮಿ ಕರುಚೆ ಮನ್ತಲಿ ದೆವಾಚಿ ಇಚ್ಚ್ಯಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:15
23 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.


ನಿಲ್ಲಲಾರರು ನಿನ್ನ ಮುಂದೆ ಗರ್ವಿಗಳು I ನಿನಗೆ ವೈರಿಗಳಾಗುವರು ಅಧರ್ಮಿಗಳು II


ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು