Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:18 - ಕನ್ನಡ ಸತ್ಯವೇದವು C.L. Bible (BSI)

18 ಕೆಲಸಗಾರರೇ, ನಿಮ್ಮ ಮೇಲಿನ ಅಧಿಕಾರಿಗಳಿಗೆ ಅಧೀನರಾಗಿರಿ. ಅವರಿಗೆ ಪೂರ್ಣಮರ್ಯಾದೆಯನ್ನು ತೋರಿಸಿರಿ. ದಯಾವಂತರೂ ಹಿತಚಿಂತಕರೂ ಆಗಿರುವ ಅಧಿಕಾರಿಗಳಿಗೆ ಮಾತ್ರವಲ್ಲ, ಕಠಿಣವಾಗಿ ವರ್ತಿಸುವವರಿಗೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣಭಯದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೇವಕರೇ, ನಿಮ್ಮ ಒಡೆಯರ ಅಧಿಕಾರವನ್ನು ಒಪ್ಪಿಕೊಳ್ಳಿರಿ. ಇದನ್ನು ತುಂಬಾ ಗೌರವದಿಂದ ಮಾಡಿರಿ. ಒಳ್ಳೆಯವರಾದ ಮತ್ತು ದಯಾಪರರಾದ ಒಡೆಯರಿಗೆ ನೀವು ವಿಧೇಯರಾಗಿರಬೇಕು ಮತ್ತು ಕೆಟ್ಟವರಾದ ಒಡೆಯರಿಗೂ ವಿಧೇಯರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸೆವಕಾನು ತುಮ್ಚ್ಯಾ ಯಜಮಾನಾಕ್ನಿ ತುಮ್ಕಾಚ್ ತುಮಿ ಒಪ್ಸುನ್ ಘೆವಾ, ಅನಿ ಸಗ್ಳ್ಯಾ ರಿತಿನ್ ತೆಂಕಾ ಮಾನ್ ದಿವಾ, ಖಾಲಿ ಬರೆ ಕರ್ತಲ್ಯಾ ಯಜಮಾನಾಕ್ ಯೆವ್ಡೆಚ್ ನ್ಹಯ್ ಖಟುರ್ ಪಾನಾನ್ ಚಲ್ವುತಲ್ಯಾ ಯಜಮಾನಾಕ್‍ಬಿ ಮಾನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:18
13 ತಿಳಿವುಗಳ ಹೋಲಿಕೆ  

ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ನನ್ನ ಬಿಟ್ಟು ತೊಲಗಲಿ ಮೂರ್ಖತನ I ನನಗೆ ಹತ್ತದೆಯಿರಲಿ ಕೆಟ್ಟತನ II


ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ವಕ್ರಹೃದಯರು ಸರ್ವೇಶ್ವರನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ಕೃಪೆಗೆ ಪಾತ್ರರು.


ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು