Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:19 - ಕನ್ನಡ ಸತ್ಯವೇದವು C.L. Bible (BSI)

19 ಯಾವನಾದರೂ ಅನ್ಯಾಯವಾಗಿ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗಿ ಬಂದಾಗ ಅದನ್ನು ದೇವರ ಹೆಸರಿನಲ್ಲಿ ಸಹಿಸಿಕೊಂಡರೆ ಅವನು ಮೆಚ್ಚುಗೆಯನ್ನು ಗಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ಕಾಯ್ಬಿ ಚುಕ್ ನಸ್ತಾನಾ ತಿಯಾ ಕಸ್ಟ್ ಸೊಸುನ್ ಘೆತಲೆ ಹೊಲ್ಲ್ಯಾರ್ ದೆವ್ ತೆಚೆಸಾಟ್ನಿ ತುಕಾ ಆಶಿರ್ವಾದ್ ದಿತಾ. ದೆವಾಚಿ ಇಚ್ಚ್ಯಾ ಕಾಯ್ ಮನುನ್ ತಿಯಾ ಕಳ್ವುನ್ ಘೆಟಲ್ಲೊ ಎಕ್ಲೊ ಮಾನುಸ್ ಕಾಯ್ ಚುಕ್ ಕರಿಸ್ತಾನಾ ತರಾಸಾತ್ ಪಡುನ್ ತೊ ತರಾಸ್ ಸೊಸುನ್ ಘೆಟ್ಲ್ಯಾರ್ ದೆವಾಕ್ನಾ ಶಬಾಸ್ಕಿ ಘೆವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:19
18 ತಿಳಿವುಗಳ ಹೋಲಿಕೆ  

ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ?


ಆದ್ದರಿಂದ ನಿಮ್ಮ ಅಧಿಕಾರಿಗಳಿಗೆ ಅಧೀನರಾಗಿರಿ. ಕೇವಲ ದಂಡನೆಯನ್ನು ತಪ್ಪಿಸಿಕೊಳ್ಳುವ ಸಲುವಾಗಿ ಅಲ್ಲ, ನಿಮ್ಮ ಮನಸ್ಸಾಕ್ಷಿಯ ಸಲುವಾಗಿ.


ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಸಹೋದರರೇ, ಮಕೆದೋನಿಯ ಸಭೆಗಳಿಗೆ ದೇವರು ದಯಪಾಲಿಸಿದ ಕೃಪಾತಿಶಯಗಳನ್ನು ನಾನು ನಿಮಗೆ ತಿಳಿಸ ಬಯಸುತ್ತೇನೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ಕೇಳಿ, ನಿಮ್ಮ ಆಲೋಚನೆಗಳನು ನಾನು ಬಲ್ಲೆ ನನಗೆ ವಿರುದ್ಧ ನೀವು ಮಾಡುವ ಕುಯುಕ್ತಿ ನನಗೆ ತಿಳಿದಿದೆ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು.


ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು